ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಾಮೀನು ಪಡೆದು ಹೊರಬಂದಿದ್ದ ರೌಡಿ ಹತ್ಯೆ

Last Updated 12 ಡಿಸೆಂಬರ್ 2020, 20:12 IST
ಅಕ್ಷರ ಗಾತ್ರ

ಬೆಂಗಳೂರು: ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ತನ್ವೀರ್ ಅಲಿಯಾಸ್ ತನ್ನು (26) ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.

’ಸಾರಾಯಿಪಾಳ್ಯ ನಿವಾಸಿ ತನ್ವೀರ್‌ ಹೆಸರು ಸಂಪಿಗೆಹಳ್ಳಿ ಠಾಣೆಯ ರೌಡಿ ಪಟ್ಟಿಯಲ್ಲಿತ್ತು. ಶುಕ್ರವಾರ ಸಂಜೆ ದುಷ್ಕರ್ಮಿಗಳ ತಂಡ ಮನೆ ಬಳಿಯೇ ಆತನನ್ನು ಕೊಂದು ಪರಾರಿಯಾಗಿದೆ. ಹಳೇ ವೈಷಮ್ಯವೇ ಕೊಲೆಗೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಹೆಣ್ಣೂರು, ದೊಡ್ಡಬಳ್ಳಾಪುರ, ಕೆ.ಜಿ.ಹಳ್ಳಿ, ಸಂಪಿಗೆಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ, ಕೊಲೆ ಯತ್ನ ಹಾಗೂ ಕೊಲೆ ಪ್ರಕರಣಗಳಲ್ಲಿ ತನ್ವೀರ್ ಭಾಗಿಯಾಗಿದ್ದ. ಹಲವು ಬಾರಿ ಜೈಲಿಗೂ ಹೋಗಿದ್ದ. ಹತ್ತು ದಿನಗಳ ಹಿಂದಷ್ಟೇ ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ. ಆತನನ್ನು ಹಿಂಬಾಲಿಸಿಯೇ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT