ಶನಿವಾರ, ಜನವರಿ 23, 2021
21 °C

ನಡುರಸ್ತೆಯಲ್ಲಿ ರೌಡಿ ಶ್ರೀನಿವಾಸ್ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶ್ರೀನಿವಾಸ್ ಅಲಿಯಾಸ್ ಕರಿ ಸೀನ (36) ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಶನಿವಾರ ಕೊಲೆ ಮಾಡಲಾಗಿದೆ.

‘ಸ್ಥಳೀಯ ನಿವಾಸಿಯಾಗಿದ್ದ ಸೀನ, ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಜೈಲಿಗೂ ಹೋಗಿ ಬಂದಿದ್ದ. ಹಳೆ ವೈಷಮ್ಯದಿಂದಾಗಿ ಎದುರಾಳಿ ಗ್ಯಾಂಗ್‌ನವರು ಆತನನ್ನು ಕೊಲೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.

‘ಲಗ್ಗೆರೆ ಕಸ್ತೂರಿನಗರದ ಬಸಪ್ಪ ಕಟ್ಟೆ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೀನ ಹೊರಟಿದ್ದ. ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿದ್ದ ಶ್ರೀನಿವಾಸ್‌ನನ್ನು ಸ್ಥಳೀಯರು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಸ್ಥಳದಲ್ಲೇ ಆತ ಮೃತಪಟ್ಟಿರುವಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ತಿಳಿಸಿದರು.

‘ಮಚ್ಚು ಹಾಗೂ ಲಾಂಗ್‌ನಿಂದ ಹೊಡೆದು, ದೇಹದ ಹಲವು ಭಾಗಗಳಿಗೆ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.