ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ಪದೇ ಪದೇ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದ ರೌಡಿ ಕೆ. ರಮೇಶ್ ಅಲಿಯಾಸ್ ಪಾಯಿಸನ್ (51) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಲಾಗಿದೆ.

‘ಕಡಬಗೆರೆ ಗ್ರಾಮದ ರಮೇಶ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ 28 ಪ್ರಕರಣಗಳು ದಾಖಲಾಗಿದ್ದವು. ಮಾದನಾಯಕನಹಳ್ಳಿ ಠಾಣೆ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಹಲವು ಬಾರಿ ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದ ಆತ, ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಗೂಂಡಾ ಕಾಯ್ದೆಯಡಿ ರಮೇಶ್ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜಿಲ್ಲಾಧಿಕಾರಿ ಅವರಿಗೆ ವರದಿ ಸಲ್ಲಿಸಲಾಗಿತ್ತು. ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿ, ಬಂಧನಕ್ಕೆ ಅನುಮತಿ ನೀಡಿದ್ದರು. ಅದರನ್ವಯ ರಮೇಶ್ನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ’ ಎಂದೂ ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.