ಬೆಂಗಳೂರು: ಪಿಸ್ತೂಲ್ ತೋರಿಸಿ ಸಾರ್ವಜನಿಕರನ್ನು ಬೆದರಿಸುತ್ತಿದ್ದ ಆರೋಪದಡಿ ರೌಡಿ ಸತ್ಯನಾದನ್ ಅಲಿಯಾಸ್ ‘ನಾಯಿ’ಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಬಂಧಿತ ಸತ್ಯನಾದನ್‌ನ ಹೆಸರು, ಮಡಿವಾಳ ಠಾಣೆಯ ರೌಡಿ ಪಟ್ಟಿಯಲ್ಲಿತ್ತು. ಈತ ರೌಡಿಗಳಾದ ಸೈಕಲ್ ರವಿ ಹಾಗೂ ಬೇಕರಿ ರಘು ಸಹಚರ. ಸತ್ಯನಾದನ್ ಕಡೆಯಿಂದ ನಾಡಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತ್ಯನಾದನ್ ಜೈಲಿಗೂ ಹೋಗಿ ಬಂದಿದ್ದ. ಈತನ ವಿರುದ್ಧದ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಸೈಕಲ್ ರವಿ ಹಾಗೂ ಬೇಕರಿ ರಘು ನೀಡಿದ್ದ ಪಿಸ್ತೂಲ್ ತನ್ನ ಬಳಿ ಇಟ್ಟುಕೊಂಡಿದ್ದ ಸತ್ಯನಾದನ್, ಅದನ್ನು ತೋರಿಸಿ ಜನರನ್ನು ಬೆದರಿಸುತ್ತಿದ್ದ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.