ಬೆಂಗಳೂರು: ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಡೈನಮೈಟ್ ಖಲೀಲ್‌ನನ್ನು ಬುಧವಾರ ರಾತ್ರಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.

ಬಂಧಿಸಲು ತೆರಳಿದ ಕೆ.ಜಿ. ಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಜಯ್ ಸಾರಥಿ ನೇತೃತ್ವದ ತಂಡದ ಮೇಲೆ, ಶಾರ್ಪ್ ಶೂಟರ್ ಕೂಡಾ ಆಗಿರುವ
ಖಲೀಲ್ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಅಜಯ್ ಸಾರಥಿ ಅವರು ಖಲೀಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಆರು ತಿಂಗಳ ಹಿಂದೆ ಚಟ್ನಿ ಸಲೀಂ ಮತ್ತು ಜುಬೇರ್ ಎಂಬಿಬ್ಬರ ಮೇಲೆ ಗುಂಡು ಹಾರಿಸಿದ್ದ ಖಲೀಲ್, ಪೊಲೀಸ ರ ಕೈಗೆ ಸಿಗದೆ ಓಡಾಡುತ್ತಿದ್ದ. ಬುಧವಾರ ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯ ಈರುಳ್ಳಿ ಗಾರ್ಡನ್ ಬಳಿ ಖಲೀಲ್ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಖಲೀಲ್‌ನ ಎರಡೂ ಕಾಲುಗಳಿಗೆ ಗುಂಡೇಟು ತಗಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಲೀಲ್ ಹಲ್ಲೆ ನಡೆಸಿದ್ದರಿಂದ ಕಾನ್‌ಸ್ಟೆಬಲ್‌ಗೂ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.