ಬೆಂಗಳೂರು: ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್‌ನನ್ನು ಚಾಮರಾಜಪೇಟೆ ಠಾಣೆಯ ಪೊಲಿಸರು ಬಂಧಿಸಿದ್ದಾರೆ.

ಅಬ್ದುಲ್ ಸುಲೇಮಾನ್ ಬಂಧಿತ ಆರೋಪಿ.

ಚಿಕ್ಕಪೇಟೆ ಸಂಚಾರ ಠಾಣೆಯ ಕಾನ್‌ಸ್ಟೆಬಲ್ ಮಂಜು ಅವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದ.

‘ಚಿಕ್ಕಪೇಟೆಯ ಬಿ.ಬಿ.ರಸ್ತೆಯಲ್ಲಿ ಮಂಜು ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಟೊ ಹಿಂದಿಕ್ಕುವ ವಿಚಾರಕ್ಕೆ ಆಟೊ ಚಾಲಕ ಹಾಗೂ ಬೈಕ್ನಲ್ಲಿದ್ದ ಅಬ್ದುಲ್ ನಡುವೆ ಗಲಾಟೆ ನಡೆದಿತ್ತು. ಆಗ ಸ್ಥಳಕ್ಕೆ ತೆರಳಿದ್ದ ಮಂಜು ಅವರು ಜಗಳ ಬಿಡಿಸಿ ಇಬ್ಬರಿಗೂ ಬುದ್ಧಿಮಾತು ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಅಬ್ದುಲ್, ಕಾನ್‌ಸ್ಟೆಬಲ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಅಲ್ಲದೇ ಅವರನ್ನು ಹಿಂಬಾಲಿಸಿ ಥಳಿಸಿದ್ದ. ಮಂಜು ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಆರೋಪಿ ವಿರುದ್ಧ ವಿಜಯನಗರ, ಜೆ.ಜೆ.ನಗರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.