ಶನಿವಾರ, ಜನವರಿ 18, 2020
20 °C

ಅನುಮಾನಾಸ್ಪದವಾಗಿ ರೌಡಿಶೀಟರ್ ಸಲೀಂ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಗಲಗುಂಟೆಯಲ್ಲಿ ರಸ್ತೆ ಬದಿಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿ, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಅಪರಿಚಿತ ವ್ಯಕ್ತಿಯನ್ನು ಯಶವಂತಪುರದ ರೌಡಿಶೀಟರ್ ಸಲೀಂ (30) ಎಂದು ಗುರುತಿಸಲಾಗಿದೆ.

ಜ. 5ರಂದು ರಾತ್ರಿ ರಸ್ತೆ ಬದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಿದ್ದಿದ್ದ. ಈ ಕುರಿತು ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಬಂದು, ಆತನನ್ನು ಸ್ಥಳೀಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಆತನ ಕುಟುಂಬಸ್ಥರ ಪತ್ತೆಗೆ ಪೊಲೀಸರು ಕ್ರಮ ತೆಗೆದುಕೊಂಡಿದ್ದರು.

ಮೃತ ವ್ಯಕ್ತಿ ಯಶವಂತಪುರದ ನಿವಾಸಿ, ರೌಡಿ ಸಲೀಂ ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆತನ ಕುಟುಂಬದವರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ಕರೆಸಿದಾಗ ಮುಖಚಹರೆಯಿಂದ ಸಲೀಂ ಎಂದು ದೃಢಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಠಾಣೆಯ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೊಲೆಗೆ ಯತ್ನ, ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಲೀಂ ವಿರುದ್ಧ ಯಶವಂತಪುರ, ನಂದಿನಿ ಲೇಔಟ್ ಸೇರಿ ಇತರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಮೈಸೂರಿನಲ್ಲಿಯೂ ಮೂರು ಪ್ರಕರಣಗಳಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು