ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಕೊಲೆ

Published 9 ನವೆಂಬರ್ 2023, 15:47 IST
Last Updated 9 ನವೆಂಬರ್ 2023, 15:47 IST
ಅಕ್ಷರ ಗಾತ್ರ

ಬೆಂಗಳೂರು: ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸಹದೇವನನ್ನು (32) ಮಾರಕಾಸ್ತ್ರಗಳಿಂದ ಹೊಡೆದು ಬುಧವಾರ ರಾತ್ರಿ ಕೊಲೆ ಮಾಡಲಾಗಿದ್ದು, ವೈಷಮ್ಯದಿಂದಾಗಿ ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.

‘ಸ್ಥಳೀಯ ನಿವಾಸಿ ಸಹದೇವ್, ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಚಹಾ ಕುಡಿಯಲು ಅಂಗಡಿಯೊಂದಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ಮೂರು ಬೈಕ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಸಹದೇವ್ ಆರೋಪಿಯಾಗಿದ್ದ. ಕೋಣನಕುಂಟೆ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿತ್ತು’ ಎಂದು ತಿಳಿಸಿವೆ.

‘ಸ್ಥಳೀಯ ಪರಿಚಯಸ್ಥರ ಜೊತೆ ಸಹದೇವ್ ಜಗಳ ಮಾಡಿದ್ದನೆಂಬ ಮಾಹಿತಿಯಿದೆ. ಇದೇ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ’ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT