ಬುಧವಾರ, ಜೂನ್ 29, 2022
25 °C

ರೌಡಿ ‘ಬಾಂಡ್‌’ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಪೊಲೀಸ್‌ ಠಾಣೆಯ ರೌಡಿಶೀಟರ್‌ ಸೈಯದ್‌ ಮಾಜ್‌ ಅಲಿಯಾಸ್‌ ಬಾಂಡ್‌ (20) ಎಂಬಾತನನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

‘ಕೆ.ಜಿ.ಹಳ್ಳಿಯ ವಿನೋಬಾನಗರ ನಿವಾಸಿಯಾಗಿರುವ ಆರೋಪಿಯು 2019ರಿಂದ 2022ರ ಫೆಬ್ರುವರಿ ಅವಧಿಯಲ್ಲಿ ಒಟ್ಟು 11 ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಒಟ್ಟು ಆರು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರವೂ ಈತ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಆರೋಪಿಯು ಗಾಂಜಾ ಮಾರಾಟ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದ. ಸಹಚರರ ಜೊತೆ ಸೇರಿ ಮಾರಕಾಸ್ತ್ರಗಳಿಂದ ನಾಗರಿಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ. ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದ. ಹೀಗಾಗಿ ಈತನನ್ನು ಒಂದು ವರ್ಷದವರೆಗೂ ಬಂಧನದಲ್ಲಿಡಲು ನಗರ ಪೊಲೀಸ್‌ ಕಮಿಷನರ್‌ ಆದೇಶಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು