ಕೆಂಗೇರಿ ಬಳಿಯ ಉಲ್ಲಾಳದಲ್ಲಿ ಪವನ್ ಗೌಡ ಇದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಆಗ ಆರೋಪಿ ಪವನ್ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ರೌಡಿ ಮೇಲೆ ಗುಂಡು ಹಾರಿಸಿದರು. ಪವನ್ ಕಾಲಿಗೆ ಗುಂಡೇಟು ಬಿದ್ದು ಗಾಯ ವಾಗಿದೆ. ಘಟನೆಯಲ್ಲಿ ಕಾನ್‌ಸ್ಟೆಬಲ್ ವೆಂಕಟೇಶ್ ಅವರಿಗೂ ಗಾಯವಾಗಿದೆ ಎಂದು ಪೊಲೀಸರು ಹೇಳಿದರು.