ಯಲಹಂಕ: ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಲು ತರಬೇತಿಗೆ ಆಯ್ಕೆಯಾಗಿರುವ 224 ಯುವ ಸೇನಾನಿಗಳಿಗೆ ಕೇಂದ್ರ ಪಂಚಾಯತ್‌ರಾಜ್ ಖಾತೆ ರಾಜ್ಯ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ನೇಮಕಾತಿ ಪತ್ರ ವಿತರಿಸಿದರು.
ಗಡಿ ಭದ್ರತಾ ಪಡೆ(ಬಿ.ಎಸ್.ಎಫ್) ಸಹಾಯಕ ಪ್ರಶಿಕ್ಷಣ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ರೋಜ್ಗಾರ್ ಮೇಳದಲ್ಲಿ ಅವರು ನೇಮಕಾತಿ ಪತ್ರ ವಿತರಣೆ ಮಾಡಿದರು.
ನೇಮಕಾತಿ ಪಡೆದ ವಿದ್ಯಾರ್ಥಿಗಳು ಹೆಚ್ಚಿನ ಶ್ರದ್ಧೆಯೊಂದಿಗೆ ದೇಶದ ಭದ್ರತೆಯ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಿಎಸ್‌ಎಫ್, ಸಿಆರ್‌ಪಿಎಫ್, ಎಸ್.ಎಸ್.ಬಿ ಮತ್ತು ಐಟಿಬಿಪಿಗೆ ಒಟ್ಟು 224 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು.
ಗಡಿಭದ್ರತಾ ಪಡೆ ಕೇಂದ್ರದ ಐಜಿ ಜಾರ್ಜ್ ಮಂಜೂರನ್, ಕಮಾಂಡೆಂಟ್ ವಿಪಿನ್ ವಿಲಾಸ್ ನಾಯ್ಕ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.