ಬೆಂಗಳೂರು: ‘ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು. ಚಾಮುಂಡೇಶ್ವರಿ ತಾಯಿ ಮೇಲೆ ಆಣೆ ಮಾಡಿ ಹೇಳುತ್ತೇನೆ. ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇನೆ’ ಎಂದು ಆರ್.ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದರು.

ಕ್ಷೇತ್ರದಲ್ಲಿ ಗೆಲುವು ಖಚಿತವಾಗುತ್ತಿದ್ದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲ ಚುನಾವಣೆಯಲ್ಲಿ 17 ಸಾವಿರ ಮತಗಳಿಂದ, ಎರಡನೇ ಚುನಾವಣೆಯಲ್ಲಿ 26 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದೆ. ಈ ಬಾರಿ 57 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದೇನೆ’ ಎಂದರು.

‘ನನ ಗೆಲುವಿಗೆ ಎಲ್ಲರೂ ಕಾರಣ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವರು, ಶಾಸಕರಿಗೆ ನನ್ನ ಗೆಲುವುನ್ನು ಅರ್ಪಿಸುತ್ತೇನೆ’ ಎಂದರು.

‘ನನ್ನ ವಿರೋಧಿ ಅಭ್ಯರ್ಥಿ (ಕಾಂಗ್ರೆಸ್‌ನ ಕುಸುಮಾ) ನಿಜ ಮಾತನಾಡಬೇಕು. ಕೊನೆ ಕ್ಷಣದಲ್ಲಿ ನಾನು ಆಡದ ಮಾತನ್ನು ಆಡಿದ್ದೇನೆ ಎಂದು ಹೇಳಿ ಅಪಪ್ರಚಾರ ಮಾಡಿದರು. ಆದರೆ, ನಾನು ಎಂದೂ ಹೆಣ್ಣು ಮಕ್ಕಳು ವಿರುದ್ದ ಮಾತನಾಡಲಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.