ಮಂಗಳವಾರ, ನವೆಂಬರ್ 24, 2020
26 °C

ಬೆಂಗಳೂರು: ಸಿದ್ದರಾಮಯ್ಯ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Siddaramaiah

ಬೆಂಗಳೂರು: ಆರ್‌.ಆರ್‌.ನಗರ ಕ್ಷೇತ್ರದ ಯಶವಂತಪುರ ಬಿ.ಕೆ. ನಗರದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು.

ಸಿದ್ದರಾಮಯ್ಯ ಮತ್ತು ಪಕ್ಷದ ಅಭ್ಯರ್ಥಿ ಕುಸುಮಾ ಅವರಿದ್ದ ವಾಹನ ಮುಂದಕ್ಕೆ ಚಲಿಸದಂತೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು. ಆದರೆ, ಸಿದ್ದರಾಮಯ್ಯ ಅವರು ವಾಪಸು ಹೋಗಲು ಒಪ್ಪಲಿಲ್ಲ.

ದಾಂಧಲೆ ನಡೆಸುತ್ತಿರುವವರನ್ನು ಬಂಧಿಸುವಂತೆ ಸ್ಥಳದಲ್ಲಿದ್ದ ಪೊಲೀಸರಿಗೆ ಸೂಚಿಸಿದ ಸಿದ್ದರಾಮಯ್ಯ, ತಕ್ಷಣ ಕ್ರಮ ತೆಗೆದುಕೊಳ್ಳದಿದ್ದರೆ ‘ನಿಮ್ಮ ಮನೆಯ ಮುಂದೆ ಧರಣಿ ನಡೆಸಬೇಕಾಗುತ್ತದೆ’ ಎಂದೂ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು