ಬುಧವಾರ, ಡಿಸೆಂಬರ್ 2, 2020
22 °C
ಚುನಾವಣೆ ಬಳಿಕ ಕೋವಿಡ್‌ ಪರೀಕ್ಷೆ

ಆರ್‌.ಆರ್‌.ನಗರ ಚುನಾವಣೆ: 84 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್‌ ಸೋಂಕು–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನದ ನಡೆದ ಬಳಿಕ ಈ ಕ್ಷೇತ್ರದಲ್ಲಿ ನಡೆಸಿರುವ ಕೋವಿಡ್‌ ಪರೀಕ್ಷೆಗಳಲ್ಲಿ ಒಟ್ಟು 84 ಮಂದಿಗೆ ಸೋಂಕು ದೃಢಪಟ್ಟಿದೆ.

ಮತದಾನ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಯು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬಿಬಿಎಂಪಿ ಸೂಚಿಸಿತ್ತು. ಅಲ್ಲದೇ, ಈ ಕ್ಷೇತ್ರದಲ್ಲಿ ಬಹಿರಂಗ ಚುನಾವಣಾ ಪ್ರಚಾರ ನಡೆದಿದ್ದ ಕಡೆಗಳಲ್ಲಿ, ಜನ ಗುಂಪುಗೂಡಿದ್ದಲ್ಲಿ ಹಾಗೂ ಮತಗಟ್ಟೆಗಳಿರುವಲ್ಲಿ ನ.6ರಿಂದ ನ.10ವರೆಗೆ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

2,310 ಸಿಬ್ಬಂದಿಯಲ್ಲಿ ಆರು ಮಂದಿಯಲ್ಲಿ ಸೋಂಕು ಇದೆ. ಚುನಾವಣಾ ಭದ್ರತಾ ಕಾರ್ಯ ನಿರ್ವಹಿಸಿದ್ದ 287 ಪೊಲೀಸ್‌ ಸಿಬ್ಬಂದಿಯಲ್ಲಿ ಒಬ್ಬರಲ್ಲೂ ಸೋಂಕು ಪತ್ತೆಯಾಗಿಲ್ಲ.

‘ಈ ಕ್ಷೇತ್ರದ 12,417 ಮಂದಿ ಸಾರ್ವಜನಿಕರಲ್ಲಿ 78 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು