ರಾಜರಾಜೇಶ್ವರಿನಗರ: ‘ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ರಸ್ತೆ ದುರಸ್ತಿ ಮಾಡಲು ವಿಫಲವಾಗಿರುವ ಎಂಜಿನಿಯರ್ಗಳ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಕೆಪಿಸಿಸಿ ವಕ್ತಾರೆ ಎಚ್.ಕುಸುಮ ಅವರು ಬೆಂಗಳೂರು ಪಶ್ಚಿಮ ನಗರಪಾಲಿಕೆ ಆಯುಕ್ತ ಕೆ.ವಿ.ರಾಜೇಂದ್ರ ಅವರಿಗೆ ದೂರು ನೀಡಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ದಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರಲು ರಸ್ತೆ ಗುಂಡಿ ಮುಚ್ಚದಂತೆ ಸ್ಥಳೀಯ ಶಾಸಕ ಮುನಿರತ್ನ ಅವರು ಅಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆ’ ಎಂದು ದೂರಿದ್ದಾರೆ.

‘ರಾಜಕೀಯದಿಂದಾಗಿ ಜನ ತೊಂದರೆ ಅನುಭವಿಸುತ್ತಿದ್ದು, ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.