ಸೋಮವಾರ, ಅಕ್ಟೋಬರ್ 18, 2021
26 °C

ಉಡುಪಿ ಉದ್ಯಮಿಗೆ ₹10 ಲಕ್ಷ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ವಾಸ್ತವಾಂಶ ಮರೆಮಾಚಿದ್ದ ಉಡುಪಿಯ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ ವಿಧಿಸಿದೆ.

ಪ್ರಮೋದ್ ಮಧ್ವರಾಜ್ ಒಡೆತನದ ಮೀನು ಸಂಸ್ಕರಣಾ ಘಟಕವನ್ನು ಪರಿಸರ ಕಾನೂನು ಉಲ್ಲಂಘಿಸಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ಪ್ರಶಾಂತ್ ಅಮಿನ್ ಅರ್ಜಿ ಸಲ್ಲಿಸಿದ್ದರು.

‘ದಂಡದ ಮೊತ್ತವನ್ನು ಕರ್ನಾಟಕ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಒಂದು ತಿಂಗಳಲ್ಲಿ ಜಮೆ ಮಾಡಬೇಕು’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

‘ಒಂದು ತಿಂಗಳಲ್ಲಿ ದಂಡದ ಮೊತ್ತ ಪಾವತಿಸದಿದ್ದರೆ ಉಡುಪಿ ಜಿಲ್ಲಾಧಿಕಾರಿ ವಸೂಲಿ ಮಾಡಬೇಕು’ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು