ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ವ್ಯಾಪಾರಿ ಸೋಗು: ₹2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

Published 5 ಏಪ್ರಿಲ್ 2024, 15:01 IST
Last Updated 5 ಏಪ್ರಿಲ್ 2024, 15:01 IST
ಅಕ್ಷರ ಗಾತ್ರ

ಬೆಂಗಳೂರು: ಬಟ್ಟೆ ವ್ಯಾಪಾರಿ ಸೋಗಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ಸೇಕಾ ಗಿಸಲೈನ್ ಟಾನೊ (33) ಎಂಬಾತನನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಐವರಿ ಕೋಸ್ಟ್‌ದ ಟಾನೊ, 2022ರಲ್ಲಿ ಬೆಂಗಳೂರಿಗೆ ಬಂದಿದ್ದ. ಹೊಂಗಸಂದ್ರದ ಮನೆಯಲ್ಲಿ ಉಳಿದುಕೊಂಡಿದ್ದ. ಬಟ್ಟೆ ವ್ಯಾಪಾರದ ಸೋಗಿನಲ್ಲಿ ಪರಿಚಯಸ್ಥರಿಗೆ ಡ್ರಗ್ಸ್ ಮಾರುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಈತನನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘₹ 2 ಕೋಟಿ ಮೌಲ್ಯದ 2 ಕೆ.ಜಿ 24 ಗ್ರಾಂ ತೂಕದ ಎಂಡಿಎಂಎ ಮಾತ್ರೆಗಳು, ಮೊಬೈಲ್ ಹಾಗೂ ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ಜಾಮೀನು ಮೇಲೆ ಹೊರಬಂದಿದ್ದ: ‘ಮುಂಬೈನಲ್ಲೂ ಆರೋಪಿ ಕೆಲ ತಿಂಗಳು ನೆಲೆಸಿದ್ದ. ಅಲ್ಲಿಯೂ ಬಟ್ಟೆ ವ್ಯಾಪಾರಿ ಎಂಬುದಾಗಿ ಹೇಳಿಕೊಂಡು ಸುತ್ತಾಡುತ್ತಿದ್ದ. ಕೆಲ ಪೆಡ್ಲರ್‌ಗಳ ಜೊತೆ ಒಡನಾಟವಿಟ್ಟುಕೊಂಡು, ಅವರಿಂದ ಡ್ರಗ್ಸ್ ಖರೀದಿಸಿ ಮಾರುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಡ್ರಗ್ಸ್ ಮಾರುತ್ತಿದ್ದ ಸಂದರ್ಭದಲ್ಲಿಯೇ ಶಂಕರಪುರ ಪೊಲೀಸರ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದ. ಕೆಲ ದಿನ ಜೈಲಿನಲ್ಲಿದ್ದ ಈತ, ಜಾಮೀನು ಮೇಲೆ ಹೊರಬಂದಿದ್ದ. ಪುನಃ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT