ಗುರುವಾರ , ನವೆಂಬರ್ 26, 2020
21 °C

₹ 37.80 ಲಕ್ಷ ಸುಲಿಗೆ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಬೆದರಿಸಿ ₹37.80 ಲಕ್ಷ ಸುಲಿಗೆ ಮಾಡಿದ್ದ ಆರೋಪದಡಿ ಅಸ್ಲಂ ಪಾಷಾ (39) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜೆ.ಜೆ. ನಗರದ ನಿವಾಸಿ ಅಸ್ಲಂ ಪಾಷಾ, ಸಹಚರರ ಜೊತೆ ಸೇರಿ ಕೃತ್ಯ ಎಸಗಿದ್ದ. ಆತನಿಂದ ₹ 30.54 ಲಕ್ಷ ನಗದು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ‘ನ. 9ರಂದು ರಾತ್ರಿ ಮಾಮೂಲ್‌ಪೇಟೆಯಲ್ಲಿರುವ ಮೆಹ್ತಾ ಪ್ಲಾಜಾ ಬಳಿ ವ್ಯಕ್ತಿಯೊಬ್ಬರಿಂದ ₹ 37.80 ಲಕ್ಷ ಪಡೆದಿದ್ದ ಬಟ್ಟೆ ವ್ಯಾಪಾರಿ, ಅದನ್ನು ತಮ್ಮ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಡುತ್ತಿದ್ದರು. ಅದೇ ವೇಳೆ ಸ್ಥಳಕ್ಕೆ ಬಂದ ಆರೋಪಿಗಳು, ಕಬ್ಬಿಣದ ರಾಡ್‌ಗಳನ್ನು ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.