ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಬಿಎಂಪಿಗೆ ₹675 ಕೋಟಿ ಬಿಡುಗಡೆ

Published 24 ಜನವರಿ 2024, 0:30 IST
Last Updated 24 ಜನವರಿ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ವಿಶೇಷ ಮೂಲಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆಯ ₹3 ಸಾವಿರ ಕೋಟಿ ಅನುದಾನದಲ್ಲಿ ಮೂರನೇ ತ್ರೈಮಾಸಿಕದ ₹675 ಕೋಟಿಯನ್ನು ಬಿಬಿಎಂಪಿಗೆ ಸರ್ಕಾರ ಜ.23ರಂದು ಬಿಡುಗಡೆ ಮಾಡಿದೆ.

ಬಂಡವಾಳ ಬೆಂಬಲ ಯೋಜನೆ ಯ ಕಾಮಗಾರಿಗಳಿಗೆ ಮಾತ್ರ ಈ ಅನುದಾನವನ್ನು ಬಿಡುಗಡೆ ಮಾಡ ಬೇಕು ಎಂದು ಬಿಬಿಎಂಪಿಗೆ ಷರತ್ತು ವಿಧಿಸಲಾಗಿದೆ.

ಯೋಜನೆಯ ₹3 ಸಾವಿರ ಕೋಟಿ ಅನುದಾನದಲ್ಲಿ ಮೊದಲ ಎರಡು ತ್ರೈಮಾಸಿಕದಲ್ಲಿ ₹1,350 ಕೋಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ₹2,150 ಕೋಟಿ ಮೊತ್ತದ ಬಿಲ್‌ಗಳು ಇನ್ನೂ ಬಾಕಿ ಉಳಿದಿವೆ. ಈ ಬಿಲ್‌ಗಳನ್ನು ಪಾವತಿಸದಿದ್ದಲ್ಲಿ ಕಾಮಗಾರಿಗಳು ಕುಂಠಿತವಾಗುವ ಸಂಭವ ಇರುತ್ತದೆ‌. ಹೀಗಾಗಿ, ಮೂರನೇ ತ್ರೈಮಾಸಿಕದ ₹675 ಕೋಟಿ ಅನುದಾನವನ್ನು ಬಾಕಿ ಬಿಲ್‌ಗಳಿಗೆ ತುರ್ತಾಗಿ ಬಿಡುಗಡೆ ಮಾಡಲು ಮುಖ್ಯ ಆಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಅನುದಾನ ಬಿಡುಗಡೆ ಆದೇಶದಲ್ಲಿ ಸೂಚಿಸಲಾಗಿದೆ.

ಎರಡನೇ ತ್ರೈಮಾಸಿಕದಲ್ಲಿ ಬಿಡುಗಡೆ ಮಾಡಲಾಗಿದ್ದ ₹675 ಕೋಟಿಯಲ್ಲಿ ₹100 ಕೋಟಿಯನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಂಸ್ಥೆಗೆ ಬಿಡುಗಡೆ ಮಾಡಲು ಆದೇಶಿಸಲಾಗಿತ್ತು. ಈ ಹಣವನ್ನು ಮುಂದುವರಿದ ಕಾಮಗಾರಿಗಳಿಗೆ ವಿನಿಯೋಗಿಸಬೇಕು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT