ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆರೆಸ್ಸೆಸ್ ಕಚೇರಿಗೆ ಮುಕ್ತ ಪ್ರವೇಶ: ಸ್ಪಷ್ಟನೆ

Published 6 ಡಿಸೆಂಬರ್ 2023, 15:49 IST
Last Updated 6 ಡಿಸೆಂಬರ್ 2023, 15:49 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಕಚೇರಿ ಹಾಗೂ ಸ್ಮಾರಕ ಕಟ್ಟಡಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಆಡಿಯೊ ಹೇಳಿಕೆಯಲ್ಲಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತಿಳಿಸಿದ್ದಾರೆ. 

ನಾಗಪುರದ ಆರೆಸ್ಸೆಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಉಂಟಾದ ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ‌ಹಂಚಿಕೊಂಡಿದ್ದ ಗೂಳಿಹಟ್ಟಿ ಶೇಖರ್, ‘ಜಾತಿ ಕಾರಣಕ್ಕೆ ಹೆಡಗೇವಾರ್‌ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ’ ಎಂದು ಆರೋಪಿಸಿದ್ದರು. ಈ ಬಗ್ಗೆ ಆರೆಸ್ಸೆಸ್ ಸ್ಪಷ್ಟನೆ ನೀಡಿದೆ. 

‘ನಾಗಪುರದಲ್ಲಿ ಸಂಘದ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ, ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ ಹಾಗೂ ಹುರುಳಿಲ್ಲದ ಆರೋಪ. ಆರೆಸ್ಸೆಸ್‌ನ ಕಚೇರಿ, ಸ್ಮಾರಕ ಕಟ್ಟಡಗಳಿಗೆ ಎಲ್ಲ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ’ ಎಂದು ನಾ. ತಿಪ್ಪೇಸ್ವಾಮಿ ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT