ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021-22) ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಒಂದನೇ ತರಗತಿಯ ಉಚಿತ ಪ್ರವೇಶಕ್ಕೆ ಅರ್ಹ 11,531 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಲಾಗಿದ್ದು, 4,755 ಮಕ್ಕಳಿಗೆ ಸೀಟು ಹಂಚಿಕೆ ಮಾಡಲಾಗಿದೆ.

ಆನ್ಲೈನ್ ಮೂಲಕ ಮೊದಲನೇ ಸುತ್ತಿನ ಲಾಟರಿ ಆಯ್ಕೆ ಪ್ರಕ್ರಿಯೆ ಮಂಗಳವಾರ ನಡೆಯಿತು. ಆಯ್ಕೆಯಾದ ಮಕ್ಕಳ ಪೋಷಕರು ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಸೀಟು ಹಂಚಿಕೆ ಮಾಹಿತಿ ರವಾನೆ ಆಗಲಿದೆ. ಪೋಷಕರು ಇದೇ 25ರಿಂದ ಜುಲೈ 9ರ ಒಳಗೆ ಸೀಟು ಹಂಚಿಕೆಯಾದ ಶಾಲೆಗಳಿಗೆ
ತೆರಳಿ ತಮ್ಮ ಮಕ್ಕಳ ದಾಖಲಾತಿ ಮಾಡಿಕೊಳ್ಳಬೇಕು. ಹಂಚಿಕೆ ವಿವರ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿಯೂ (www.schooleducation.kar.nic.in) ಲಭ್ಯವಿದೆ.

‘ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಸೀಟು ಹಂಚಿಕೆ ಮಾಡಲಾಗಿದೆ. ಖಾಸಗಿ ಶಾಲೆಯವರು ಮತ್ತೊಮ್ಮೆ ದಾಖಲೆ ಪರಿಶೀಲಿಸುವ ನೆಪದಲ್ಲಿ ಪೋಷಕರನ್ನು ಅಲೆದಾಡಿಸಬಾರದು’ ಎಂದು ಆರ್ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎನ್. ಯೋಗಾನಂದ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.