ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ ಹಣ ಮರುಪಾವತಿಸಿ: ಮೇಲ್ಮನೆ ಸದಸ್ಯರ ಆಗ್ರಹ

Last Updated 26 ಜುಲೈ 2020, 14:56 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಅನುದಾನಿತ ಶಾಲೆಗಳ ಆರ್‌ಟಿಇ ಹಣ ಮರುಪಾವತಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದು, ಈ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

‘2019–20ನೇ ಸಾಲಿನ ಮೊದಲನೇ ಕಂತಿನ ₹275 ಕೋಟಿಯನ್ನು ಆರ್ಥಿಕ ಇಲಾಖೆ ಬಿಡುಗಡೆ ಮಾಡಿದೆ. ಆದರೆ, 45 ದಿನಗಳಾದರೂ, ಸಂಬಂಧಿಸಿದ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಂತದಲ್ಲಿ ಹಣ ಬಿಡುಗಡೆಯಾಗಿಲ್ಲ. ಆಯುಕ್ತರ ಕಚೇರಿಯ ಆರ್‌ಟಿಇ ವಿಭಾಗದ ವಿಳಂಬ ಧೋರಣೆಯಿಂದ ಖಾಸಗಿ ಅನುದಾನಿತ ಶಾಲೆಗಳಿಗೆ ತೊಂದರೆಯಾಗುತ್ತಿದೆ’ ಎಂದು ವಿಧಾನಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಹಾಗೂ ಮಾಜಿ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ.

‘ಆನ್‌ಲೈನ್‌ ಮೂಲಕ ಹಣಪಾವತಿ ತುಂಬಾ ವಿಳಂಬವಾಗುತ್ತಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೂಡಲೇ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್‌ ಅವರಿಗೆ ಒತ್ತಾಯಿಸಿದ್ದಾರೆ.

‘ಖಾಸಗಿ ಅನುದಾನರಹಿತಶಿಕ್ಷಣ ಸಂಸ್ಥೆಗಳು ಸರ್ಕಾರ ನೀಡಿರುವ ರಿಯಾಯಿತಿ ದರದ ಸರ್ಕಾರಿ ಜಾಗದಲ್ಲಿ ಶಾಲೆಗಳನ್ನು ನಡೆಸುತ್ತಿದ್ದರೆ, ಇಂತಹ ಶಾಲೆಗಳಿಗೆ ಆರ್‌ಟಿಇ ಹಣ ಮರುಪಾವತಿ ಮಾಡುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿರುವುದು ಅವೈಜ್ಞಾನಿಕ. ಸಚಿವ ಸಂಪುಟದ ಅನುಮೋದನೆ ಪಡೆಯದೆ ಈ ಆದೇಶ ಹೊರಡಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು’ ಎಂದೂ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT