ಸೋಮವಾರ, ಅಕ್ಟೋಬರ್ 19, 2020
24 °C

ಪರವಾನಗಿ ಇಲ್ಲದ 4 ಬಸ್‌ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪರವಾನಗಿ ಇಲ್ಲದೆ ರಾಜ್ಯದಲ್ಲಿ ಸಂಚರಿಸುತ್ತಿರುವ ಬಸ್‌ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು,  ನಾಲ್ಕು ಬಸ್‌ಗಳನ್ನು ಸೋಮವಾರ ವಶಕ್ಕೆ ಪಡೆದಿದ್ದಾರೆ.

‘ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್‌ ನೇತೃತ್ವದಲ್ಲಿ ಬಳ್ಳಾರಿ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ನಾಗಾಲ್ಯಾಂಡ್‌ ಹಾಗೂ ಅರುಣಾಚಲ‌ ಪ್ರದೇಶದ ಪರವಾನಗಿ ಹೊಂದಿರುವ ಬಸ್‌ಗಳು ರಾಜ್ಯದಲ್ಲಿ ಸಂಚರಿಸುತ್ತಿರುವುದು ಪತ್ತೆ ಆಯಿತು’ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

’ರಾಜ್ಯಕ್ಕೆ ತೆರಿಗೆ ಪಾವತಿಸಿ ಪರವಾನಗಿ ಪಡೆಯದೆ ವಂಚಿಸುತ್ತಿರುವ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ಬಸ್‌ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ದಾಖಲೆಗಳನ್ನು ನೀಡಿದ ನಂತರ ನಿಗದಿತ ದಂಡ ವಿಧಿಸಲಾಗುವುದು’ ಎಂದು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು