ಬೆಂಗಳೂರು: ವಿಧಾನಸಭೆಯ ನೂತನ ಉಪ ಸಭಾಧ್ಯಕ್ಷರಾಗಿ ಹಾವೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
ಉಪ ಸಭಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ರುದ್ರಪ್ಪ ಲಮಾಣಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಎಂ. ಪಟ್ಟಣ ಲಮಾಣಿ ಅವರ ಹೆಸರನ್ನು ಸೂಚಿಸಿದರೆ, ಕಾಂಗ್ರೆಸ್ ಸದಸ್ಯ ಬಸವರಾಜ ನೀಲಪ್ಪ ಶಿವಣ್ಣವರ್ ಅನುಮೋದಿಸಿದರು. ಬಳಿಕ ಪ್ರಸ್ತಾವವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.