ಸೋಮವಾರ, ಆಗಸ್ಟ್ 15, 2022
20 °C

ರುದ್ರೇಶ್ ಹತ್ಯೆ: ಆರೋಪಿ ಜಾಮೀನು ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಆಸೀಮ್ ಶರೀಫ್ ಅನಾರೋಗ್ಯದ ಕಾರಣ ನೀಡಿ ಕೋರಿದ್ದ ಜಾಮೀನು ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಎನ್‌ಐಎ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಐದನೇ ಆರೋಪಿ ಆಸೀಮ್ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮೇಲ್ಮನವಿಯಲ್ಲಿ ಜಾಮೀನಿಗೆ ಅನಾರೋಗ್ಯ ಮತ್ತು ವಿಚಾರಣೆ ವಿಳಂಬದ ಕಾರಣಗಳನ್ನು ನೀಡಲಾಗಿದೆ. ಆದರೆ, ಆರೋಪಿಯ ಹೃದಯ ಸಂಬಂಧಿ ಕಾಯಿಲೆ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ 2020ರ ಸೆ.6ರ ವರದಿ ಆಧರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಸೆ.8ರಂದು ಜಾಮೀನು ನಿರಾಕರಿಸಿ ಆದೇಶಿಸಿತ್ತು. ಹೀಗಾಗಿ, ಮೇಲ್ಮನವಿಯಲ್ಲಿ ಈ ಅಂಶ ಪರಿಗಣಿಸಲು ಸಾಧ್ಯವಿಲ್ಲ‘ ಎಂದು ಅಭಿಪ್ರಾಯಪಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು