ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಐದನೇ ಆರೋಪಿ ಅಸೀಮ್ ಷರೀಫ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಿವಾಜಿನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರುಕೊಲೆ ಮಾಡಿದ್ದರು.ಈ ಘಟನೆ 2016ರ ಅಕ್ಟೋಬರ್ 16ರಂದು ಬೆಳಗ್ಗೆ 9 ಗಂಟೆ ವೇಳೆಗೆ ನಡೆದಿತ್ತು.

ಈ ಪ್ರಕರಣದಲ್ಲಿ, ಅಸೀಮ್ ಷರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಜಹರ್ ಮತ್ತು ಮಹಮ್ಮದ್ ಮುಜೀಬುಲ್ಲಾ ಅಲಿಯಾಸ್ ಮೌಲಾ ಆರೋಪಿಗಳಾಗಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ರುದ್ರೇಶ್ ಸ್ನೇಹಿತರಾದ ಬಿ.ಜಯರಾಂ, ಡಿ.ಕುಮಾರೇಶನ್ ಮತ್ತು ಹರಿಕೃಷ್ಣ ಅವರುಸಾಕ್ಷಿಗಳಾಗಿದ್ದಾರೆ.ಎನ್ಐಎ ವಿಶೇಷ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಆರೋಪಿಗಳ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ಅಕ್ರಮ ಕೂಟ ಕಾಯ್ದೆ–1967ರ ಅಡಿಯಲ್ಲೇ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.