ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಕೃತ ವಿವಿಯಲ್ಲಿ ಅಕ್ರಮ, ನಿಯಮ ಉಲ್ಲಂಘನೆ: ಅಭ್ಯರ್ಥಿ ಆರೋಪ

Last Updated 14 ಜೂನ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಗಾಳಿಗೆ ತೂರುತ್ತಿದ್ದು, ಈ ವಿಶ್ವವಿದ್ಯಾಲಯದಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ’ ಎಂದು ವಿಶ್ವವಿದ್ಯಾಲಯದ ಎಂಎ ವ್ಯಾಕರಣ ವಿಭಾಗದ ಅಭ್ಯರ್ಥಿ ಪಿ.ಆರ್‌. ಅನಂತ ಐತಾಳ್‌ ದೂರಿದ್ದಾರೆ.

‘ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರಿಗೆ ದಾಖಲೆ, ಸಾಕ್ಷ್ಯಗಳ ಸಹಿತ ದೂರು ನೀಡಿದರೂ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

‘ಈ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ 2019ರ ಡಿಸೆಂಬರ್‌ನಿಂದಲೂ ದೂರುಗಳನ್ನು ನೀಡುತ್ತಲೇ ಬಂದಿದ್ದೇನೆ. ವಿಶ್ವವಿದ್ಯಾಲಯ ತೆಗೆದುಕೊಂಡ ಕ್ರಮದ ಪ್ರತಿಯನ್ನು ಕೋರಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯ ಮೇಲ್ಮನವಿಗೆ ಯಾವುದೇ ಉತ್ತರವನ್ನು ಈವರೆಗೆ ಕೊಟ್ಟಿಲ್ಲ. ನಿಯಮ ಉಲ್ಲಂಘನೆ, ಅಕ್ರಮ ನಡೆಯುತ್ತಿರುವುದು ನಿಜ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಒಪ್ಪಿಕೊಂಡರೂ, ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT