ಭಾನುವಾರ, ಜೂಲೈ 5, 2020
28 °C
ಬಿಎಂಸಿಆರ್‌ಐ ಪದವಿ ಪ್ರದಾನ ಸಮಾರಂಭ: ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

ಗ್ರಾಮೀಣ ಸೇವೆ–ವೈದ್ಯರಿಗೆ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಸರ್ಕಾರದ ವತಿಯಿಂದ ವಿಶೇಷ ಪ್ರೋತ್ಸಾಹ ಸಿಗುವಂತೆ ಮಾಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಇಲ್ಲಿನ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ) ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಒಂದು ವೈದ್ಯಕೀಯ ಕಾಲೇಜು ತೆರೆಯುವ ಆಸಕ್ತಿಯನ್ನು ಹೊಂದಿದೆ’ ಎಂದು ತಿಳಿಸಿದರು.

‘ಕೇವಲ ಹಣ ಸಂಪಾದನೆಗೆಂದು ನಮ್ಮ ವೃತ್ತಿಯನ್ನು ಮೀಸಲಿಡಬಾರದು. ವೈದ್ಯರು ರೋಗಿಗಳ ವಿಶ್ವಾಸ ಗಳಿಸಬೇಕು. ಮಾನವೀಯ ಮೌಲ್ಯ ಅರ್ಥೈಸಿಕೊಂಡು ವೃತ್ತಿ ನಿರ್ವಹಿಸಬೇಕು’ ಎಂದರು.

ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಪಾಲ್ಗೊಂಡಿದ್ದರು.

*
ಆಯುಷ್ಮಾನ್‌ ಭಾರತ್ ಮೂಲಕ ಬಡ ಕುಟುಂಬಕ್ಕೆ ₹ 5 ಲಕ್ಷದವರೆಗೆ ವಿಮೆ ಪಡೆಯುವುದು ಸಾಧ್ಯವಾಗಿದೆ. ರಾಜ್ಯವೂ ಇದರಲ್ಲಿ ಕೈಜೋಡಿಸಿದೆ.
-ಡಾ.ಕೆ.ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು