ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಕಾಟಂನಲ್ಲೂರಿನಲ್ಲಿ ಗ್ರಾಮಾಂತರ ಮಂಡಲ ಆರ್ಡಬ್ಲ್ಯುಎ ವತಿಯಿಂದ ನಡೆಯಲಿರುವ 'ಅರವಿಂದ ಲಿಂಬಾವಳಿ ಟಿ-10 ಆರ್ಡಬ್ಲ್ಯುಎ ಕ್ರಿಕೆಟ್ ಪಂದ್ಯಾವಳಿಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾನುವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಕ್ರೀಡೆ ನಮ್ಮ ಮಾನಸಿಕ ಆರೋಗ್ಯವನ್ನು ಸುಧಾರಣೆ ಮಾಡುವ ಮೂಲಕ ಉತ್ತಮ ಚಟುವಟಿಕೆಗಳಿಗೆ ನಾಂದಿ ಹಾಡುತ್ತದೆ’ ಎಂದು ಹೇಳಿದರು.

ಇದೇ ವೇಳೆ ಅರವಿಂದ ಲಿಂಬಾವಳಿ ಅವರು, ಟಿ-10 ಆರ್ಡಬ್ಲ್ಯುಎ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ತಂಡಗಳ ಜೆರ್ಸಿ(ಟಿ–ಶರ್ಟ್) ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್.ಎಸ್. ಪಿಳ್ಳಪ್ಪ, ಗ್ರಾಮಾಂತರ ಮಂಡಲದ ಆರ್ಡಬ್ಲ್ಯುಎ ಅಧ್ಯಕ್ಷ ಮಂಜುನಾಥ ಪಾಟೀಲ್, ಕೆ.ಎಂ.ಮಂಜುನಾಥ್, ಕೆ.ವಿ. ನಾಗರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.