ಬೇರೆ ಬೇರೆ ಕಾಲೇಜು ಹಾಗೂ ಸಂಸ್ಥೆಗಳಿಂದ 50ಕ್ಕೂ ಹೆಚ್ಚು ನಾವೀನ್ಯತೆಯ ಪ್ರದರ್ಶನ ಮಳಿಗೆಗಳು ಅನಾವರಣಗೊಂಡಿವೆ. ಪ್ರತಿಯೊಂದು ವಿಭಿನ್ನವಾಗಿದ್ದು, ವಿದ್ಯಾರ್ಥಿಗಳ ಸೃಜನಶೀಲತೆಗೆ ಇವು ಸಾಕ್ಷಿಯಾಗಿವೆ. ಶಾಲಾಕಾಲೇಜಿನ ವಿದ್ಯಾರ್ಥಿಗಳು, ಯುವ ಸಮೂಹ ಹಾಗೂ ಸಾರ್ವಜನಿಕರು ಈ ಪ್ರದರ್ಶನವನ್ನು ವೀಕ್ಷಿಸಿ ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು. ಇಂತಹ ವಿದ್ಯಾರ್ಥಿಗಳೇ ಮುಂದೆ ಮಹತ್ವದ ಸಾಧನೆ ಮಾಡಲಿದ್ದಾರೆ.
ಡಾ. ಎಸ್. ಸೋಮನಾಥ್, ಇಸ್ರೋ ಮಾಜಿ ಅಧ್ಯಕ್ಷರು ಹಾಗೂ ಚಾಣಕ್ಯ ವಿ.ವಿ.ಯ ಕುಲಪತಿ
ವೇದಾಂತ ಭಾರತಿ ಸಂಸ್ಥೆ ವಿದ್ಯಾರ್ಥಿಗಳಿಗೆ ಧಾರ್ಮಿಕ, ವೈಜ್ಞಾನಿಕ ಮನೋಭಾವ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ನಾವು ನಡೆಸುತ್ತಿರುವ ಚಟುವಟಿಕೆಗಳ ಫಲ ವಿದ್ಯಾರ್ಥಿ ಸಮುದಾಯಕ್ಕೆ ತಲುಪುತ್ತಿದೆಯೋ ಇಲ್ಲವೋ ಎನ್ನುವ ಕುರಿತು ಕಾಲ ಕಾಲಕ್ಕೆ ಅಭಿಪ್ರಾಯ ಸಂಗ್ರಹ, ಮೌಲ್ಯ ಮಾಪನ ಮಾಡುತ್ತಿದ್ದೇವೆ. ಸಾಕಷ್ಟು ಬದಲಾವಣೆ, ಸುಧಾರಣೆ ಮೂಲಕ ನಾವು ಸಮಾಜದಲ್ಲಿ ರಚನಾತ್ಮಕ ಚಟುವಟಿಕೆಯನ್ನು ಮುಂದುವರೆಸುತ್ತಿದ್ದೇವೆ.
ಶಂಕರ ಭಾರತಿ ಸ್ವಾಮೀಜಿ, ಕೆ. ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರ