ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದಲ್ಲಿ ರಾತ್ರಿ ಪಟಾಕಿ ಸಿಡಿತ: ಪೊಲೀಸರಿಗೆ ಸುರೇಶ್ ಕುಮಾರ್ ಪತ್ರ

ಅಕ್ಷರ ಗಾತ್ರ

ಬೆಂಗಳೂರು: ರಾತ್ರಿ 10 ಗಂಟೆಯ ಬಳಿಕ ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರಿಂದ ಹಲವರಿಗೆ ಸಮಸ್ಯೆಯಾಗುತ್ತಿದೆ ಎಂದು ಪೊಲೀಸ್ ಇಲಾಖೆಗೆ ರಾಜಾಜಿನಗರ ಶಾಸಕ ಎಸ್‌. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಮಧ್ಯರಾತ್ರಿ ಹುಟ್ಟಿದಹಬ್ಬ ನೆಪದಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಭ್ರಮಾಚರಣೆಯ ನೆಪದಲ್ಲಿ ಶಬ್ಧಮಾಲಿನ್ಯ ಉಂಟಾದರೆ, ಎಳೆ ಮಕ್ಕಳಿಗೆ, ವೃದ್ಧರಿಗೆ ಮತ್ತು ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಸಮಸ್ಯೆಯಾಗುತ್ತದೆ. ಪಶು–ಪಕ್ಷಿಗಳಿಗೂ ತೊಂದರೆಯಾಗುತ್ತಿದೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ವಿವರಿಸಿದ್ದಾರೆ.

ಆದ್ದರಿಂದ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸುರೇಶ್ ಕುಮಾರ್ ಪತ್ರದಲ್ಲಿ ಬೆಂಗಳೂರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT