ಕೆಂಗೇರಿ : ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಪಾಯ ಹಾಕುವ ಪ್ರಾಥಮಿಕ ಶಿಕ್ಷಣವು ಗುಣ ಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಎಸ್. ಟಿ. ಸೋಮಶೇಖರ್ ಹೇಳಿದರು.

ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಚಗುಪ್ಪೆ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ದೇಶದ ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಸುಸಜ್ಜಿತ ಕಟ್ಟಡದಂತಹ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳು ಅಸಂಖ್ಯಾತ ಪ್ರತಿಭೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಶಾಲಾ ಆವರಣದಲ್ಲಿ ಹೆಚ್ಚುವರಿಯಾಗಿ ಎರಡು ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಶಿಕ್ಷಕಿ ಉಮಾ ತಿಳಿಸಿದರು.

ಅಗರ ಗ್ರಾಮ, ಮೈಸೂರು ರಸ್ತೆಯ ಹೊಸಪಾಳ್ಯ, ನಾಲ್ಕು ಕಂಬದ ಸರ್ಕಲ್ ಹಾಗೂ ಲಕ್ಕಯ್ಯನಪಾಳ್ಯದ ರಸ್ತೆ ಅಭಿವೃದ್ಧಿ ಕಾಮಗಾರಿಗೂ ಗುದ್ದಲಿ ಪೂಜೆ ನೆರವೇರಿಸಲಾಯಿತು. ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.