ಗುರುವಾರ , ಮೇ 19, 2022
24 °C

ಡಾ. ಶಿವಲಿಂಗಯ್ಯ ಕೊಲೆಗೆ ಯತ್ನ: ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಸಂಸ್ಥಾಪಕ ಟ್ರಸ್ಟಿಯೂ ಆಗಿರುವ ವೈದ್ಯ ಡಾ. ಎಲ್‌. ಶಿವಲಿಂಗಯ್ಯ ಅವರ ಕೊಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಶಿವಲಿಂಗಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕೊಲೆಗೆ ಯತ್ನ ನಡೆದಿರುವ ಬಗ್ಗೆ ಮಗ ಡಾ. ರವಿ ಪ್ರಕಾಶ್ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

‘ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿದ್ದರಿಂದ ಶಿವಲಿಂಗಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ನಡೆಸಿದಾಗ, ದೇಹದಲ್ಲಿ  ಅಲ್ಪಪ್ರಮಾಣದಲ್ಲಿ ವಿಷದ ಅಂಶವಿರುವುದು ಪತ್ತೆಯಾಗಿದೆ. ಅದೇ ಅನುಮಾನದಲ್ಲಿ ಪುತ್ರ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆಸ್ತಿ ವಿಚಾರವಾಗಿ ಕುಟುಂಬದವರ ನಡುವೆ ವ್ಯಾಜ್ಯವಿದೆ. ಆಸ್ತಿ ಕಬಳಿಸುವ ಉದ್ದೇಶದಿಂದ ವಿಷ ಹಾಕಿರುವ ಆರೋಪವೂ ಕೇಳಿಬರುತ್ತಿದೆ. ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು