ಸೋಮವಾರ, ಸೆಪ್ಟೆಂಬರ್ 27, 2021
25 °C

ಅಪಾಯಕಾರಿ ಚಾಲನೆ: ಉದ್ಯಮಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮರ್ಸಿಡಿಸ್ ಬೆನ್ಜ್ ಕಾರನ್ನು ಅಪಾಯಕಾರಿ ರೀತಿಯಲ್ಲಿ ಚಲಾಯಿಸಿದ್ದ ಪ್ರಕರಣದಲ್ಲಿ ಉದ್ಯಮಿ ಸಂಚಿತ್ ಶೆಟ್ಟಿ ಎಂಬುವರಿಗೆ ಸದಾಶಿವನಗರ ಸಂಚಾರ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಸೆ. 11ರಂದು ರಾತ್ರಿ ಅಪಾಯಕಾರಿ ರೀತಿಯಲ್ಲಿ ಕಾರು ಚಲಾಯಿಸಲಾಗಿತ್ತು. ಕಾರಿನ ಸನ್‌ ರೂಫ್‌ನಲ್ಲಿ ನಿಂತುಕೊಂಡು ಕೂಗಾಡಿದ್ದ ಯುವಕರು, ಮೋಜು– ಮಸ್ತಿ ಮಾಡಿದ್ದರು. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ಆಧರಿಸಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

‘ಅಪಘಾತ ಸಂಭವಿಸುವ ರೀತಿಯಲ್ಲಿ ಕಾರು ಚಲಾಯಿಸಲಾಗಿತ್ತು. ಸಾರ್ವಜನಿಕರ ಜೀವಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇತ್ತು. ಹೀಗಾಗಿ, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಉದ್ಯಮಿ ಸಂಚಿತ್ ಶೆಟ್ಟಿ ಹೆಸರಿನಲ್ಲಿ ಕಾರು ನೋಂದಣಿ ಆಗಿದೆ. ಪ್ರಕರಣ ದಾಖಲಾದ ಹಾಗೂ ಕಾರು ಜಪ್ತಿ ಮಾಡಿದ ಬಗ್ಗೆ ಉಲ್ಲೇಖಿಸಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.