ಬುಧವಾರ, ಏಪ್ರಿಲ್ 14, 2021
31 °C

‘ಸಫಾಯಿ ಮಿತ್ರ ಸುರಕ್ಷಾ ಸವಾಲು’ ಬೀದಿ ನಾಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಳಚರಂಡಿ ಮತ್ತು ಗುಂಡಿಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿಗಳ ಸಾವು ಮತ್ತು ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಲಮಂಡಳಿಯು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಟಕಗಳನ್ನು ಆಯೋಜಿಸಿದೆ.

ದಿನಕ್ಕೆ ಮೂರು ಸ್ಥಳದಲ್ಲಿ ಈ ನಾಟಕಗಳು ಪ್ರದರ್ಶನಗೊಳ್ಳಲಿವೆ. ಈ ತಿಂಗಳ ಕೊನೆಯವರೆಗೆ ಪ್ರದರ್ಶನ ನಡೆಯಲಿದೆ ಎಂದು ಅದು ಹೇಳಿದೆ.

ಸಾರ್ವಜನಿಕರು ಅಷ್ಟೇ ಅಲ್ಲದೆ, ಸಫಾಯಿ ಕರ್ಮಚಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳಲ್ಲಿ ಅರಿವು ಮೂಡಿಸಲು ಮತ್ತು ಮಲ ಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಲುವಾಗಿ ವಿಚಾರ ವಿನಿಮಯ ಕಾರ್ಯಕ್ರಮಗಳ ಮೂಲಕ ಈ  ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮಂಡಳಿಯು ತಮಟೆ ಗ್ರಾಮೀಣ ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ರಕ್ಷೆ-ಸುರಕ್ಷೆ ಎಂಬ ಘೋಷವಾಕ್ಯದಡಿಯಲ್ಲಿ ಈ ಅಭಿಯಾನ ನಡೆಸುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸುವ ಕೆಲಸ ಈ ಬೀದಿ ನಾಟಕಗಳ ಮೂಲಕ ಆಗಲಿದೆ ಎಂದು ಮಂಡಳಿ ಹೇಳಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು