ಬೆಂಗಳೂರು: ಅಸಹಾಯಕ ಮಹಿಳೆಯರಿಗಾಗಿ ತೆರೆದಿರುವ ಸಖಿ ಹಾಗೂ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಬಾರದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ಈ ಕೇಂದ್ರಗಳನ್ನು ಮುಚ್ಚಿದರೆ ಅಶಕ್ತ ಮಹಿಳೆಯರಿಗೆ ತೊಂದರೆ ಆಗಲಿದೆ. ಜೀವನದಲ್ಲಿ ನೋಂದ ಮಹಿಳೆಯರು ಸಖಿ ಹಾಗೂ ಸಾಂತ್ವನ ಕೇಂದ್ರಗಳ ಮೂಲಕ ಕಾನೂನು ಹೋರಾಟ ಮಾಡಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ನೋಂದ ಮಹಿಳೆಯರು ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈ ಕೇಂದ್ರಗಳು ನೆರವಾಗುತ್ತಿವೆ. ಆದ್ದರಿಂದ ಸಖಿ ಹಾಗೂ ಸಾಂತ್ವನ ಕೇಂದ್ರಗಳನ್ನು ಮುಚ್ಚದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.