ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಎಂಟಿಸಿ ಚಾಲಕರಿಗೆ ವೇತನ ವ್ಯತ್ಯಯ: ಪ್ರತಿಭಟನೆ

Published 14 ಮೇ 2024, 18:22 IST
Last Updated 14 ಮೇ 2024, 18:22 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಟಿಸಿ ವಿದ್ಯುತ್‌ಚಾಲಿತ ಬಸ್‌ಗಳ ಚಾಲಕರು ವೇತನ ನೀಡಿಲ್ಲ ಎಂದು ಆರೋಪಿಸಿ ಮಂಗಳವಾರ ದಿಢೀರ್‌ ಪ್ರತಿಭಟನೆ ನಡೆಸಿದ್ದರಿಂದ ಬಸ್‌ ಸಂಚಾರದಲ್ಲಿ ವ್ಯತ್ಯಯವಾಯಿತು.

ಭಾರತ ಸರ್ಕಾರದ ಫೇಮ್‌–2 ಯೋಜನೆಯಡಿ ಮೊದಲ ಹಂತದಲ್ಲಿ 2023ರ ಡಿಸೆಂಬರ್‌ನಲ್ಲಿ ಎಲೆಕ್ಟ್ರಿಕ್‌ ಹವಾನಿಯಂತ್ರಿತ ಬಸ್‌ಗಳು ಶಾಂತಿನಗರ ಘಟಕದಿಂದ ಆರಂಭವಾಗಿದ್ದವು. ಎಂ/ಎಸ್‌. ಟಿಎಂಎಲ್‌ ಸ್ಮಾರ್ಟ್‌ ಸಿಟಿ ಮೊಬಿಲಿಟಿ ಸಲ್ಯೂಶನ್ಸ್‌ ಲಿಮಿಟೆಡ್‌ ಕಂಪನಿಯವರು ಈ ಬಸ್‌ಗಳನ್ನು ನಿರ್ವಹಿಸುತ್ತಿದ್ದರು. ಬಸ್ ನಿರ್ವಹಣೆ ಮತ್ತು ಚಾಲಕನ ವೇತನವನ್ನು ಆ ಸಂಸ್ಥೆಯವರು ನೀಡಬೇಕು. ಆದರೆ, ಸಮಯಕ್ಕೆ ಸರಿಯಾಗಿ ವೇತನ ನೀಡದೇ ಇದ್ದ ಕಾರಣ ಚಾಲಕರು ಪ್ರತಿಭಟನೆ ನಡೆಸಿದರು.

ಇದರಿಂದ ಮಂಗಳವಾರ ಬೆಳಿಗ್ಗೆ 7ರಿಂದ 11ರವರೆಗೆ 113 ಟ್ರಿಪ್‌ಗಳು ವ್ಯತ್ಯಯಗೊಂಡವು. ಬಿಎಂಟಿಸಿ ವತಿಯಿಂದ ಈ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ವ್ಯವಸ್ಥೆ ಮಾಡುವ ಮೂಲಕ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು.

‘ಟಿಎಂಎಲ್‌ ಸ್ಮಾರ್ಟ್‌ ಸಿಟಿ ಮೊಬಿಲಿಟಿ ಸಲ್ಯೂಶನ್ಸ್‌ ಲಿಮಿಟೆಡ್‌’ ಕಂಪನಿಗೆ ನೋಟಿಸ್‌ ನೀಡಲಾಗಿದೆ. ಮುಂದೆ ಈ ರೀತಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT