ಬೆಂಗಳೂರು: ರಾಮನವಮಿ ಹಬ್ಬದ ಪ್ರಯುಕ್ತ ಮಾರ್ಚ್ 30ರಂದು (ಗುರುವಾರ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.
ಹಬ್ಬದಂದು ಕುರಿ, ಕೋಳಿ, ಮೀನು, ಮಾಂಸ ಮಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ವಿರುದ್ಧ ಕ್ರಮಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಆಯಾ ಜಿಲ್ಲೆಗಳ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.