ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು ತಡೆ ಔಷಧ ಖರೀದಿಯಲ್ಲಿ ಅಕ್ರಮ ಆರೋಪ: ವರದಿ ನೀಡಲು ಹೈಕೋರ್ಟ್ ಸೂಚನೆ

Last Updated 23 ಮೇ 2020, 20:16 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್ಸ್‌ ಮತ್ತು ವೇರ್‌ ಹೌಸಿಂಗ್‌ ಸೊಸೈಟಿ ಮೂಲಕ ಔಷಧ ಮತ್ತು ವೈದ್ಯಕೀಯ ಉಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲಿಸಿ, ತಕ್ಷಣ ಸಮಗ್ರ ವರದಿ ನೀಡುವಂತೆ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ವಿಧಾನಸಭೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ಅಕ್ರಮ ನಡೆದಿದೆ ಎಂದು ಆರೋಪಿಸಿ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷ ಎಚ್‌.ಕೆ. ಪಾಟೀಲ ಅವರಿಗೆ ಮೇ 12ರಂದು ಕರ್ನಾಟಕ ರಾಷ್ಟ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಎನ್‌. ದೀಪಕ್‌ ದೂರು ನೀಡಿದ್ದರು. ಮೇ 19ರಂದು ನಡೆದ ಸಮಿತಿಯ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ, ಈ ಬಗ್ಗೆ ಮಾಹಿತಿ ಪಡೆದು ಸಭೆಗೆ ಮಂಡಿಸುವಂತೆ ಕಾರ್ಯದರ್ಶಿಗೆ ಸಮಿತಿ ಅಧ್ಯಕ್ಷರು ಸೂಚಿಸಿದ್ದರು.

‘ಪಿಪಿಇ ಕಿಟ್‌, ಕೊರೊನಾ ತಪಾಸಣಾ ಕಿಟ್‌, ಗ್ಲುಕೋಸ್‌, ವೆಂಟಿಲೇಟರ್‌ಗಳ ಖರೀದಿ, ಡಯಾಲಿಸಿಸ್‌ ಉಪಕರಣಗಳ ಮಾರಾಟ ಸಂದರ್ಭದಲ್ಲಿ ಯಾವುದೇ ಮುಂಜಾಗ್ರತೆ ವಹಿಸಿಲ್ಲ. ಕಳಪೆ ಗುಣಮಟ್ಟದ ಉಪಕರಣಗಳನ್ನು ಖರೀದಿಸಲಾಗಿದೆ. ದೂರು ಬಂದ ಬಳಿಕ ಈ ಉಪಕರಣಗಳನ್ನು ಮರಳಿಸಲಾಗಿದೆ. ಕರ್ನಾಟಕ ಡ್ರಗ್‌ ಲಾಜಿಸ್ಟಿಕ್ಸ್‌ ಮತ್ತು ವೇರ್‌ ಹೌಸಿಂಗ್‌ ಸೊಸೈಟಿ ಮೂಲಕ ಈ ಎಲ್ಲ ವಹಿವಾಟು ನಡೆದಿದೆ. ಹೀಗಾಗಿ, ಈ ಸಂಸ್ಥೆಯ ವಹಿವಾಟಿನ ಲೆಕ್ಕ ನಡೆಸಿ, ಸರ್ಕಾರಕ್ಕೆ ಆಗಿರುವ ನಷ್ಟ ಮತ್ತು ಅದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ದೂರಿನಲ್ಲಿ ದೀಪಕ್‌ ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT