ಗುರುವಾರ , ಸೆಪ್ಟೆಂಬರ್ 23, 2021
28 °C

12ರಿಂದ ‘ಉತ್ತಮನಾಗು–ಉಪಕಾರಿಯಾಗು’ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾಮಿ ವಿವೇಕಾನಂದರ 157ನೇ ಜನ್ಮದಿನ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸಮರ್ಥ ಭಾರತ ಸಂಸ್ಥೆಯು ಜನವರಿ 12ರಿಂದ 26ರವರೆಗೆ ‘ಉತ್ತಮನಾಗು–ಉಪಕಾರಿಯಾಗು’ ಅಭಿಯಾನ ಹಮ್ಮಿಕೊಂಡಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ‌ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ದೇವಾನಂದ ಗದ್ದಾರ್, ‘ಅಭಿಯಾನದ ಅಂಗವಾಗಿ ಇದೇ 12ರಂದು ಬೆಳಿಗ್ಗೆ 7 ಗಂಟೆಗೆ ಕಬ್ಬನ್‌ ಉದ್ಯಾನದಲ್ಲಿ ವಾಕಥಾನ್‌ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಜಯನಗರದ ಆರ್‌.ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್‌, ಸಂಸದ ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಮಧ್ಯಾಹ್ನ 3.30ಕ್ಕೆ ನೃಪತುಂಗ ರಸ್ತೆಯ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ನಡೆಯುವ ರಾಷ್ಟ್ರದ ಅಭ್ಯುದಯದಲ್ಲಿ ಮಹಿಳೆಯರ ಪಾತ್ರ ವಿಚಾರಗೋಷ್ಠಿಯಲ್ಲಿ ಶಿಕ್ಷಣ ತಜ್ಞ ಪ್ರೊ.ಪಿ.ವಿ.ಕೃಷ್ಣ ಭಟ್, ತನ್ಮಯಿ ಹಾಗೂ ತೇಜಸ್ವಿನಿ ಅನಂತಕುಮಾರ್ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು