ಮಂಗಳವಾರ, ಅಕ್ಟೋಬರ್ 20, 2020
25 °C

ಕೊರೊನಾ ದೃಢ; ವಿಚಾರಣೆಗೆ ಸಂಪತ್ ರಾಜ್ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆ ಪ್ರಕರಣದ ವಿಚಾರಣೆಗೆ ಮಾಜಿ ಮೇಯರ್‌ ಆರ್‌. ಸಂಪತ್ ರಾಜ್ ಗೈರಾಗಿದ್ದಾರೆ.

‘ಆಗಸ್ಟ್ 11ರಂದು ರಾತ್ರಿ ನಡೆದ ಗಲಭೆ ಸಂಬಂಧ ಶುಕ್ರವಾರ ಬೆಳಿಗ್ಗೆ ವಿಚಾರಣೆಗಾಗಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬನ್ನಿ’ ಎಂದು ಪೊಲೀಸರು ನೋಟಿಸ್ ನೀಡಿದ್ದರು. ಅದಕ್ಕೆ ಉತ್ತರಿಸಿರುವ ಸಂಪತ್‌ ರಾಜ್, ‘ಕೊರೊನಾ ದೃಢಪಟ್ಟಿರುವುದರಿಂದ ವಿಚಾರಣೆಗೆ ಬರಲು ಆಗುತ್ತಿಲ್ಲ. ಗುಣಮುಖವಾದ ನಂತರ ಕಚೇರಿಗೆ ಬರುತ್ತೇನೆ’ ಎಂದಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬರು, ‘ನೋಟಿಸ್‌ಗೆ ಸಂಪತ್ ರಾಜ್ ಪ್ರತಿಕ್ರಿಯಿಸಿದ್ದಾರೆ. ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ಗುಣಮುಖವಾದ ನಂತರ ವಿಚಾರಣೆಗೆ ಕರೆಯಲಾಗುವುದು’ ಎಂದು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು