ಬುಧವಾರ, ಫೆಬ್ರವರಿ 19, 2020
29 °C

ಲಕ್ಷ್ಮೀಪತಿಗೆ ‘ಸಂಸ್ಕೃತಿ ಪುರಸ್ಕಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಿದ್ಧಾರ್ಥ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ ಅವರು ತಮ್ಮ ತಂದೆ ಎಚ್‌.ಎಂ.ಗಂಗಾಧರಯ್ಯ ಹೆಸರಿನಲ್ಲಿ ನೀಡುವ ‘ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರ ಪ್ರಶಸ್ತಿ’ಗೆ ಕವಿ ಲಕ್ಷ್ಮೀಪತಿ ಕೋಲಾರ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಚಲನಚಿತ್ರ ನಿರ್ದೇಶಕ ಎನ್‌.ಎಸ್.ಶಂಕರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಡಾ.ಲಕ್ಷ್ಮಣ ದಾಸ್, ಡಾ.ರಾಜಪ್ಪ ದಳವಾಯಿ, ಜನಾರ್ದನ (ಜನ್ನಿ), ಶಿವಾಜಿ ಗಣೇಶನ್ ಹಾಗೂ ಗುಡಿಹಳ್ಳಿ ನಾಗರಾಜ್ ಅವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು. 

ಮಾ.1ಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕ ಪ್ರೊ. ಮಾದೇವ್‌ ಭರಣಿ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು