ಮಂಗಳವಾರ, ಜೂನ್ 28, 2022
20 °C

‘ಕಲಾವಿದರಿಗೆ ₹10 ಸಾವಿರ ಪರಿಹಾರ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಎರಡನೇ ಅಲೆಯಲ್ಲಿ ಕಲಾವಿದರ ಬದುಕು ತೀರಾ ಸಂಕಷ್ಟದಲ್ಲಿದೆ. ಅವರಿಗೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ‘ಸಮುದಾಯ ಕರ್ನಾಟಕ ರಾಜ್ಯ ಸಮಿತಿ‘ಯು ಸರ್ಕಾರವನ್ನು ಒತ್ತಾಯಿಸಿದೆ.

‘ಕಲಾವಿದರಿಗೆ ಸರ್ಕಾರ ಘೋಷಿಸಿರುವ ₹3 ಸಾವಿರ ಏನಕ್ಕೂ ಸಾಲುವುದಿಲ್ಲ. ಅಲ್ಲದೆ, ಈ ನೆರವು ಪಡೆಯಲು 35 ವರ್ಷವಾಗಿರಬೇಕು ಎಂಬ ಷರತ್ತು ವಿಧಿಸಿರುವುದು ಸರಿಯಲ್ಲ. ಈ ನಿಯಮದಿಂದ ಬಹುತೇಕ ಯುವ ಕಲಾವಿದರು ಪರಿಹಾರದಿಂದ ವಂಚಿತರಾಗುತ್ತಾರೆ. ಸಾವಿರಾರು ಯುವಕ–ಯುವತಿಯರು ರಂಗಭೂಮಿಯನ್ನೇ ನೆಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ನಿಯಮದಿಂದ ಸರ್ಕಾರದ ಉದ್ದೇಶವೇ ಈಡೇರಿದಂತಾಗುವುದಿಲ್ಲ’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ದೇವೇಂದ್ರ ಗೌಡ ಹೇಳಿದ್ದಾರೆ.

‘ವಯಸ್ಸಿನ ಮಿತಿಯನ್ನು ಹಿಂಪಡೆಯಬೇಕು ಮತ್ತು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.