ಮಂಗಳವಾರ, ಅಕ್ಟೋಬರ್ 27, 2020
22 °C

12ರಿಂದ ಸಂವೇದ ಇ–ಕ್ಲಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಕಾರಣದಿಂದ ಶಾಲೆಗಳು ನಡೆಯದೇ ಇರುವ ಕಾರಣಕ್ಕೆ ಶಿಕ್ಷಣ ಇಲಾಖೆ ನಡೆಸುತ್ತಿರುವ ಸಂವೇದ ಇ-ಕ್ಲಾಸ್ ಪಾಠ ಸರಣಿಯ ಎರಡನೆ ಅವಧಿ ಇದೇ 12ರಿಂದ ಆರಂಭವಾಗಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಈ ಅವಧಿಯಲ್ಲಿ 5, 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವಿಡಿಯೊ ಪಾಠಗಳನ್ನು ‘ಡಿಎಸ್‌ಇಆರ್‌ಟಿ ಜ್ಞಾನದೀಪ’ ಮತ್ತು ‘ಮಕ್ಕಳವಾಹಿನಿ’ ಯುಟ್ಯೂಬ್ ಚಾನೆಲ್‍ಗಳಲ್ಲಿ ಪ್ರಸಾರ ಮಾಡಲಾಗುವುದು. ಚಂದನ ವಾಹಿನಿಯಲ್ಲಿಯೂ ಈ ತರಗತಿಗಳು ಮರುಪ್ರಸಾರಗೊಳ್ಳಲಿವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.