ಬೆಂಗಳೂರು: ಗಂಧದ ಮರ ಕಳವು ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳನ್ನು ಪೊಲೀಸ್ ಠಾಣಾಧಿಕಾರಿಗಳು ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು (ಡಿಜಿಪಿ) ಸುತ್ತೋಲೆ ಹೊರಡಿಸಿದ್ದಾರೆ.

‘ಖಾಸಗಿ ಜಮೀನು ಅಥವಾ ಅರಣ್ಯ ಪ್ರದೇಶದಲ್ಲಿ ಬೆಳೆದ ಗಂಧದ ಮರಗಳನ್ನು ಅಕ್ರಮವಾಗಿ ಕತ್ತರಿಸುವುದು, ಕಳವು ಮಾಡಿ, ಸಾಗಿಸುವುದು ಅಥವಾ ಸಂಗ್ರಹಿಸಿಟ್ಟುಕೊಂಡ ಬಗ್ಗೆ ಗಂಧ ಮರದ ಬೆಳೆಗಾರರಾಗಲಿ ಅಥವಾ ಅರಣ್ಯ ಅಧಿಕಾರಿಗಳಾಗಲಿ ನೀಡಿದ ದೂರನ್ನು ಠಾಣಾಧಿಕಾರಿಗಳು ಕಡ್ಡಾಯವಾಗಿ ಸ್ವೀಕರಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

‘ಭಾರತೀಯ ನ್ಯಾಯ ಸಂಹಿತೆಯ ಕಲಂ 303(2) ಹಾಗೂ ಕರ್ನಾಟಕ ಅರಣ್ಯ ಕಾಯ್ದೆ ಕಲಂ 86ರ ಅಡಿಯಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 173ರ ಅನುಸಾರ ದೂರು ದಾಖಲಿಸಿಕೊಳ್ಳುವುದು ಕಡ್ಡಾಯ’ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿ, ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆ ಹೆಚ್ಚಿ, ಕದ್ದ ಗಂಧವನ್ನು ವಶಪಡಿಸಿಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಕರ್ನಾಟಕ ಅರಣ್ಯ ಅಧಿನಿಯಮ ಕಲಂ 87ರ ಅನ್ವಯ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

‘ಗಂಧದ ಮರ ಕಳವು ಪ್ರಕರಣಗಳಲ್ಲಿ ಸಂಘಟಿತ ಗುಂಪು ಕಾರ್ಯನಿರ್ವಹಿಸುತ್ತಿದ್ದರೆ, ತನಿಖಾಧಿಕಾರಿಗಳು ಆ ಗುಂಪಿನ ಮತ್ತು ಸದಸ್ಯರ ಅಪರಾಧಿಕ ಹಿನ್ನೆಲೆ ಮತ್ತು ಪ್ರಕರಣಗಳ ಮಾಹಿತಿ ಸಂಗ್ರಹಿಸಿ ಅವರ ವಿರುದ್ಧ ವಿಶೇಷ ಕಾನೂನುಗಳನ್ನು ಅನ್ವಯಿಸುವ ಕ್ರಮ ಕೈಗೊಳ್ಳಬೇಕು’ ಎಂದೂ ತಿಳಿಸಲಾಗಿದೆ.

ಸುತ್ತೋಲೆಗೂ ಮುನ್ನ: ರಾಜ್ಯದಲ್ಲಿ ಒಂದಲ್ಲ ಒಂದು ಕಡೆ ಗಂಧದ ಮರಗಳು ಕಳವಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಅದರಲ್ಲೂ ಕೃಷಿ ಜಮೀನಿನಲ್ಲಿ ಬೆಳೆಸಿದ ಮರಗಳೇ ಹೆಚ್ಚು ಕಳವಾಗುತ್ತಿವೆ. ಗಂಧದ ಮರ ಕಳುವಾದಾಗ ಬೆಳೆಗಾರರು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ಪೊಲೀಸರು 'ಇದು ಅರಣ್ಯ ಇಲಾಖೆಗೆ ಸೇರುತ್ತದೆ, ಅಲ್ಲಿಗೆ ಹೋಗಿ' ಎನ್ನುತ್ತಿದ್ದರು. ಅರಣ್ಯ ಇಲಾಖೆಗೆ ಹೋದರೆ, 'ನಮಗೆ ದೂರು ದಾಖಲಿಸಿಕೊಳ್ಳುವ ಅಧಿಕಾರವಿಲ್ಲ, ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ’ ಎಂದು ಕಳುಹಿಸುತ್ತಿದ್ದರು.

ಕೆಲವು ಪ್ರಕರಣಗಳಲ್ಲಂತೂ, ರೈತರು ದೂರು ಕೊಟ್ಟು ಮೂರು ತಿಂಗಳಾದರೂ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ. ಕೊನೆಗೆ ರೈತರು, ಸಂಘಟನೆಗಳ ನೆರವಿನಿಂದ ಉನ್ನತ ಪೊಲೀಸ್ ಅಧಿಕಾರಿಗಳು ಅಥವಾ ಸಚಿವರ ಮೂಲಕ ಹೇಳಿಸಿದ ಮೇಲೆ ದೂರು ಸ್ವೀಕರಿಸಿದ್ದಾರೆ.

ಸರ್ಕಾರದ ಗಮನಕ್ಕೆ: ಶ್ರೀಗಂಧ ಬೆಳೆಗಾರರಿಗೆ ದೂರು ನೀಡಲು ಉಂಟಾಗುತ್ತಿರುವ ಸಮಸ್ಯೆಯನ್ನು ಗಮನಿಸಿದ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ (ಕೆಎಸ್ಎಸ್ಎಎಫ್ಜಿಎ) ಪದಾಧಿಕಾರಿಗಳು ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದರು. ಗೃಹ ಸಚಿವರು, ಮುಖ್ಯ ಕಾರ್ಯದರ್ಶಿಯವರನ್ನು ಭೇಟಿಯಾಗಿ, ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು, ಇದಕ್ಕೆ ಪರಿಹಾರ ಸೂಚಿಸುವಂತೆ ಮನವಿ ಮಾಡಿದ್ದರು.

ನಂತರ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮತ್ತು ಅರಣ್ಯ ಇಲಾಖೆಗಳ ಅಧಿಕಾರಿಗಳ ಜಂಟಿ ಸಭೆ ನಡೆಸಿ, ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ಸಮಾನ ಮಾರ್ಗದರ್ಶಿ ನಿಯಮಗಳನ್ನು ರೂಪಿಸುವಂತೆ ಡಿಜಿಪಿಗೆ ಸೂಚಿಸಿದ್ದರು.

‘14 ತಿಂಗಳ ಹೋರಾಟಕ್ಕೆ ಫಲ ದೊರೆತಿದ್ದು, ಜೂನ್ 2 ರಂದು ಡಿಜಿಪಿ ಅವರು ಕಡ್ಡಾಯವಾಗಿ ಠಾಣಾಧಿಕಾರಿಗಳು ದೂರು ಸ್ವೀಕರಿಸುವಂತೆ ಸುತ್ತೋಲೆ ಹೊರಡಿಸಿದ್ದಾರೆ’ ಎಂದು ಸಂಘದ ಅಧ್ಯಕ್ಷ ಕೆ. ಅಮರನಾರಾಯಣ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಕ್ರಮದಿಂದಾಗಿ ಇನ್ನು ಮುಂದೆ ಗಂಧದ ಮರಗಳ ಕಳ್ಳತನದ ದೂರುಗಳನ್ನು ದಾಖಲಿಸಿಕೊಳ್ಳಲು ಪೊಲಿಸ್ ಠಾಣೆಯಲ್ಲಿ ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.