ಭಾನುವಾರ, ಜೂಲೈ 5, 2020
22 °C

ರೈಲ್ವೆ ಕೌಂಟರ್‌ ಸಮಯ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವ ಕೌಂಟರ್‌ಗಳ ಕಾರ್ಯನಿರ್ವಹಣೆ ಅವಧಿಯನ್ನು ರೈಲ್ವೆ ಇಲಾಖೆ ಬದಲಾಯಿಸಿದೆ.

ಬೆಳಿಗ್ಗೆ 8ರಿಂದ ಸಂಜೆ 6ರ ತನಕ ಈ ಕೌಂಟರ್‌ಗಳು ಕಾರ್ಯನಿರ್ವಹಿಸಲಿವೆ. ಭಾನುವಾರ ಸಂಪೂರ್ಣ ಕರ್ಫ್ಯೂ ಇರುವ ಹಿನ್ನೆಲೆಯಲ್ಲೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ರೈಲು ನಿಲ್ದಾಣ ಹೊರತುಪಡಿಸಿ ಉಳಿದ ಕೌಂಟರ್‌ಗಳ ಕಾರ್ಯನಿರ್ವಹಣೆ ಇರುವುದಿಲ್ಲ. ಕೆಎಸ್‌ಆರ್‌ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಕಾರ್ಯನಿರ್ವಹಿಸಲಿದೆ’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು