ಬುಧವಾರ, ಆಗಸ್ಟ್ 12, 2020
24 °C

ವಿಧಾನಸೌಧಕ್ಕೆ ಸ್ಯಾನಿಟೈಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿಧಾನಸೌಧದ ಇಬ್ಬರು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಸಚಿವಾಲಯದ ಬಹುತೇಕ ಎಲ್ಲ ಕೊಠಡಿಗಳನ್ನು ಸೋಮವಾರ ಸ್ಯಾನಿಟೈಸ್‌ ಮಾಡಲಾಯಿತು.

ವಿಧಾನಸೌಧದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಮತ್ತು ಗಾರ್ಡ್‌ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸ್ಯಾನಿಟೈಸ್‌ ಮಾಡಲು ಭಾನುವಾರವೇ ಆದೇಶ ಹೊರಡಿಸಿ, ಸಿಬ್ಬಂದಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಬರಲು ಸೂಚಿಸಲಾಗಿತ್ತು.

55 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚಾಗಿ ಕೆಲಸ ಮಾಡುವ ಕೆಲವು ಕೊಠಡಿಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಕೊಠಡಿಗಳನ್ನೂ ಸ್ಯಾನಿಟೈಸ್‌ ಮಾಡಲಾಗಿದೆ. 55 ವರ್ಷ ಮೇಲ್ಪಟ್ಟವರು  ಕೆಲಸಕ್ಕೆ ಬರುವುದು ಬೇಡ ಎಂದು ಸೂಚನೆ ನೀಡಿದ್ದರಿಂದ, ಕೆಲವು ಕೊಠಡಿಗಳ ಬೀಗ ತೆರೆಯಲು ಸಾಧ್ಯವಾಗಲಿಲ್ಲ. ಇಂತಹ ಕೆಲವು ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿಲ್ಲ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

‘ಪೊಲೀಸ್‌ ಕಾನ್‌‌ಸ್ಟೆಬಲ್‌ ಒಬ್ಬರು ಆರೋಗ್ಯ ಸರಿ ಇರಲಿಲ್ಲ ಎಂದು ಹೇಳಿದ್ದರಿಂದ ಶನಿವಾರವೇ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಭಾನುವಾರವೂ ವಿಧಾನಸೌಧಕ್ಕೆ ಬಂದಿದ್ದರು. ಆ ವೇಳೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ರಾತ್ರಿ ವೇಳೆ ಕಾವಲು ಕಾಯುವ ಪೊಲೀಸರು ಮತ್ತು ಗಾರ್ಡ್‌ಗಳು ಒಂದೇ ಕೊಠಡಿಯಲ್ಲಿ ಮಲಗುತ್ತಾರೆ. ಇದೂ ಕೂಡ ಆತಂಕಕ್ಕೆ ಕಾರಣವಾಗಿದೆ. ಗಾರ್ಡ್‌ಗಳು ಎಲ್ಲ ಕೊಠಡಿಗಳ ಮತ್ತು ಗೇಟ್‌ಗಳ ಬಾಗಿಲು ಹಾಕುವುದರಿಂದ ವೈರಸ್‌ ಹರಡುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸ್‌ ಮಾಡಿಸಲಾಗಿದೆ ’ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು