ಶನಿವಾರ, ಅಕ್ಟೋಬರ್ 31, 2020
27 °C

ರಾಗಿಣಿ, ಸಂಜನಾ ವಿಚಾರಣೆ ಮುಂದುವರಿಸಿದ ಇಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್‌ ಪೂರೈಕೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರನ್ನು ಅಕ್ರಮ ಹಣ ವರ್ಗಾವಣೆ, ಹವಾಲಾ, ಅಕ್ರಮ ಆಸ್ತಿ ಸಂಪಾದನೆ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರವೂ ವಿಚಾರಣೆ ನಡೆಸಿದರು.

ಸಿಸಿಬಿ ಪೊಲೀಸರ ತನಿಖೆಯಲ್ಲಿ ಕಂಡು ಬಂದಿರುವ ಅಂಶಗಳನ್ನು ಆಧರಿಸಿ ಇಬ್ಬರೂ ನಟಿಯರ ವಿರುದ್ಧ ಇ.ಡಿ ಕೂಡ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರನ್ನು ಐದು ದಿನಗಳ ಕಾಲ ವಿಚಾರಣೆ ನಡೆಸಲು ನ್ಯಾಯಾಲಯ ಇ.ಡಿ ಅಧಿಕಾರಿಗಳಿಗೆ ಅನುಮತಿ ನೀಡಿತ್ತು.

ನಟಿಯರು ಡ್ರಗ್ಸ್‌ ಜಾಲದಲ್ಲಿ ಸಂಪಾದಿಸಿರುವ ಹಣ, ಹವಾಲಾ ಸ್ವರೂಪದ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು, ಅಂತರರಾಷ್ಟ್ರೀಯ ಮಟ್ಟದಲ್ಲಿನ ವಹಿವಾಟುಗಳಿಗೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ನಟಿಯರನ್ನು ಪ್ರಶ್ನಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಕಾರಾಗೃಹಕ್ಕೆ ಬಂದ ಅಧಿಕಾರಿಗಳು ಇಬ್ಬರನ್ನೂ ಸಂಜೆಯವರೆಗೂ ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು