ಭಾನುವಾರ, ಜೂನ್ 26, 2022
22 °C

ಕಿಶೋರ್‌ ಸಾವು ಪ್ರಕರಣ: ಇಬ್ಬರ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಪಾದಚಾರಿ ಮಾರ್ಗ ದಲ್ಲಿದ್ದ ಮರದಲ್ಲಿ ನೇತಾಡುತ್ತಿದ್ದ ವಿದ್ಯುತ್‌ ಕೇಬಲ್‌ನ ತಂತಿ ಸ್ಪರ್ಶಿಸಿ ಕಿಶೋರ್‌ (22) ಎಂಬುವರು ಮೃತಪಟ್ಟಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಂಜಯನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

‘ಏರ್‌ಟೆಲ್‌ ಕಂಪನಿಯ ಸಂಜಯನಗರದ ಉಸ್ತುವಾರಿಯಾಗಿರುವ ನವೀನ್‌ ಎಂಬುವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರು ನೀಡಿದ ಮಾಹಿತಿ ಮೇರೆಗೆ ಮತ್ತೊಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಇನ್ನೂ ಇಬ್ಬರ ವಿಚಾರಣೆ ನಡೆಸಬೇಕಿದೆ. ಸದ್ಯಕ್ಕೆ ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು