ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ನಾಪತ್ತೆಯಾಗಿದ್ದ ವೃದ್ಧನ ಮೃತದೇಹ ಪತ್ತೆ

Published : 14 ಫೆಬ್ರುವರಿ 2024, 23:34 IST
Last Updated : 14 ಫೆಬ್ರುವರಿ 2024, 23:34 IST
ಫಾಲೋ ಮಾಡಿ
Comments

ಬೆಂಗಳೂರು: ಮನೆಯಿಂದ ನಾಪತ್ತೆಯಾಗಿದ್ದ ವೃದ್ಧ ನಾರಾಯಣಸ್ವಾಮಿ (60) ಅವರ ಮೃತದೇಹ ಸ್ಯಾಂಕಿ ಕೆರೆಯಲ್ಲಿ ಬುಧವಾರ ಪತ್ತೆಯಾಗಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬಸವೇಶ್ವರನಗರ ನಿವಾಸಿ ನಾರಾಯಣಸ್ವಾಮಿ, ಫೆ. 12ರಂದು ಮನೆಯಿಂದ ನಾಪತ್ತೆಯಾಗಿದ್ದರು. ಹಲವೆಡೆ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ನಾಪತ್ತೆ ಬಗ್ಗೆ ಕುಟುಂಬಸ್ಥರು ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾರಾಯಣಸ್ವಾಮಿ, ಜಿಗುಪ್ಸೆಗೊಂಡು ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಕೆರೆಯಲ್ಲಿ ಮೃತದೇಹ ನೋಡಿದ್ದ ವಾಯುವಿಹಾರಿಗಳು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು’ ಎಂದು ತಿಳಿಸಿವೆ.

‘ಆರಂಭದಲ್ಲಿ ಮೃತ ವ್ಯಕ್ತಿ ಹೆಸರು ಗೊತ್ತಾಗಿರಲಿಲ್ಲ. ಫೋಟೊವನ್ನು ನಗರ ಹಾಗೂ ಹೊರ ಜಿಲ್ಲೆಗಳ ಠಾಣೆಗಳಿಗೆ ಕಳುಹಿಸಲಾಗಿತ್ತು. ಬಸವೇಶ್ವರನಗರ ಠಾಣೆ ಪೊಲೀಸರು, ಸಂಬಂಧಿಕರನ್ನು ಕರೆತಂದು ಮೃತದೇಹ ಗುರುತಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT